ಬಿಟ್ ಕಾಯಿನ್, ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ.

ಹುಬ್ಬಳ್ಳಿ,ಅಕ್ಟೋಬರ್,28,2021(www.justkannada.in):  ಬಿಟ್ ಕಾಯಿನ್  ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಣೆ ಮಾಡುತ್ತಿರುವುದಾಗಿ  ವಿಪಕ್ಷ ನಾಯಕ ಸಿದ್ಧರಾಮಯ್ಯ  ಆರೋಪ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಿಟ್ ಕಾಯಿನ್ ,ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮದೇ ಸರ್ಕಾರ ಈ ಪ್ರಕರಣವನ್ನು ಇಡಿ ಹಾಗೂ ಸಿಬಿಐ ತನಿಖೆಗೆ ವಹಿಸಿದೆ. ತನಿಖೆ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳೀಸಿದರು.

ರಾಜ್ಯ ಸರ್ಕಾರವು ಬಿಟ್ ಕಾಯಿನ್, ಡ್ರಗ್ ಕೇಸ್ ಪ್ರಕರಣ ಕುರಿತಂತೆ ಸಮಗ್ರ ತನಿಖೆಯನ್ನು ನಡೆಸಿದೆ. ಈ ತನಿಖೆಯ ಬಳಿಕವೇ ಇಡಿ ಹಾಗೂ ಸಿಬಿಐ ತನಿಖೆಗೆ ವಹಿಸಿದೆ. ಸಿದ್ದರಾಮಯ್ಯ ಕೂಡ ಒಬ್ಬ ಸಿಎಂ ಆಗಿದ್ದವರು. ಉಪ ಚುನಾವಣೆ ಸಲುವಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ನಾವು ಯಾರನ್ನು ರಕ್ಷಿಸುತ್ತಿಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Bitcoin- no question – protecting -anyone – drug  case-  CM -Basavaraja Bommai