ಮತದಾರರಿಗೆ ಮೋಸ ಮಾಡಿರುವ ಬಿಜೆಪಿ ಅಭ್ಯರ್ಥಿಗೆ ತಕ್ಕ ಪಾಠ ಕಲಿಸಿ- ಆರ್.ಆರ್ ನಗರಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ..

Promotion

ಬೆಂಗಳೂರು,ಅಕ್ಟೋಬರ್,27,2020(www.justkannada.in):  ಇಲ್ಲಿನ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಪಕ್ಷಕ್ಕೆ ಚೂರಿ ಹಾಕಿ ಮತದಾರರಿಗೆ ಮೋಸ ಮಾಡಿದ್ದಾರೆ. ಹೀಗಾಗಿ ಅವರನ್ನ ಸೋಲಿಸಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರ್.ಆರ್ ನಗರ ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು.jk-logo-justkannada-logo

ಆರ್. ಆರ್ ಕ್ಷೇತ್ರದ ವಿವಿಧ ಕಡೆಗಳಲ್ಲಿ ಇಂದು ರೋಡ್ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ  ಪ್ರಚಾರ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಮುನಿರತ್ನ ಅವರಿಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಟಿಕೆಟ್ ನೀಡಿ ಶಾಸಕರನ್ನಾಗಿ ಮಾಡಿತು. ಅವರು ಈ ರೀತಿ ಪಕ್ಷಕ್ಕೆ ದ್ರೋಹ ಬಗೆಯುತ್ತಾರೆ ಎಂದು ಗೊತ್ತಿರಲಿಲ್ಲ. ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿರಬೇಕು ಎಂದಾದರೆ ಕುಸುಮಾ ಅವರಿಗೆ ಮತದಾರರು ಆಶೀರ್ವಾದ ಮಾಡಬೇಕು ಎಂದರು.

ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ  ಈ ಕ್ಷೇತ್ರಕ್ಕೆ ಎರಡು ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ  ನೀಡಿದ್ದೇವೆ. ಅನುದಾನ ಪಡೆದುಕೊಳ್ಳಲು ಮುನಿರತ್ನ, ಸೋಮಶೇಖರ್ ಬೈರತಿ ಬಸವರಾಜು ಅವರ ನಡುವೆ ಭಾರಿ ಪೈಪೋಟಿ ನಡೆಯುತ್ತಿತ್ತು. ಕ್ಷೇತ್ರದಲ್ಲಿ ಇಂದು ಏನಾದರೂ ಅಭಿವೃದ್ಧಿ ನಡೆದಿದ್ದರೆ ಅದು ನಮ್ಮ ಸರ್ಕಾರ ನೀಡಿದ ಅನುದಾನದಿಂದ ಎಂದು ಸಿದ್ಧರಾಮಯ್ಯ ಹೇಳಿದರು.BJP candidate -cheated –voters-  Former CM -Siddaramaiah - RR nagar- by-election

ಆರ್.ಆರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಟಕ್ಕುಂಟು ಲೆಕ್ಕಕ್ಕಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಇದೆ. ಕಾಂಗ್ರೆಸ್ ಗೆ ಮತ ನೀಡಿ ಗೆಲ್ಲಿಸಿ  ಎಂದು ಸಿದ್ಧರಾಮಯ್ಯ ಮನವಿ ಮಾಡಿದರು.

Key words: BJP candidate -cheated –voters-  Former CM -Siddaramaiah – RR nagar- by-election