ಯಶವಂತಪುರ ಕ್ಷೇತ್ರದಲ್ಲಿ ಹಾವು-ಏಣಿ ಆಟ: ಮೊದಲ ಬಾರಿಗೆ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್…

ಬೆಂಗಳೂರು,ಡಿ,9,2019(www.justkannada.in):  ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು , ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ನಡುವೆ ಯಶವಂತಪುರ ಕ್ಷೇತ್ರದಲ್ಲಿ ಹಾವು-ಏಣಿ ಆಟ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ ಮತ್ತು ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ನಡುವೆ ನೆಕ್ ಟು ನೆಕ್ ಫೈಟ್ ಉಂಟಾಗಿದೆ. .  ಮೊದಲ ಬಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್. 63 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಎಸ್ ಟಿ ಸೋಮಶೇಖರ್ ಗೆ 48, 376 ಮತಗಳು. ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡಗೆ 48,313 ಮತಗಳು ಬಂದಿವೆ.

Key words: BJP candidate- ST Somashekhar- first – Yashwantpur- constituency