ನಾನು ಬಿಜೆಪಿ ಶಿಸ್ತಿನ ಸಿಪಾಯಿ: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ- ಸಚಿವ ಶ್ರೀರಾಮುಲು.

Promotion

ಬೆಂಗಳೂರು,ಆಗಸ್ಟ್,17,2022(www.justkannada.in):  ನಾನು ಬಿಜೆಪಿಯ ಶಿಸ್ತಿನ ಸಿಪಾಯಿ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

ಸಿದ್ಧರಾಮಯ್ಯ ಸಿಎಂ ಆಗಲಿ ಎಂಬ ಹೇಳಿಕೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸಚಿವ ಶ್ರೀರಾಮುಲು, ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಸ್ಪಷ್ಟೀಕರಣ ನೀಡಿದ್ದೇನೆ. ಕಡಿಮೆ ಸಮಯ ಸಿಕ್ಕಿದ್ದರಿಂದ ಸಿದ್ದರಾಮಯ್ಯ ಗೆದ್ಧರು.  ಕಾಂಗ್ರೆಸ್ ವಿರೋಧಿಗಳು ಬಿಜೆಪಿಗೆ ಬರುತ್ತಾರೆ. ಸಿದ್ಧರಾಮಯ್ಯನೂ ಸಹ ಬರಬಹುದು ಎಂಬ ನಿಟ್ಟಿನಲ್ಲಿ ಹೇಳಿದ್ದೇನೆ.  ಹಿಂದುಳಿದ ಜಾತಿಗಳು ಒಗ್ಗೂಡಬೇಕು ಎಂದಿದ್ದೇನೆ ಎಂದರು.

ನಾಣು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ. ನಾನು ಬಿಜೆಪಿ ಶಿಸ್ತಿನ ಸಿಪಾಯಿ . ನನ್ನ ಜೀವ ಇರುವವರೆಗೂ ಬಿಜೆಪಿಯಲ್ಲೇ ಇದ್ದೇನೆ. ಹೊಂದಾಣಿಕೆ ರಾಜಕಾರಣ ನನ್ನ ಜಾಯಮಾನದಲ್ಲೇ ಇಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

Key words:  BJP –discipline-Congress – Minister -Sriramulu