ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ವಿಫಲ- ಶಾಸಕ ಯತೀಂದ್ರ ಸಿದ್ಧರಾಮಯ್ಯ.

Promotion

ಮೈಸೂರು,ಜುಲೈ,30,2022(www.justkannada.in):  ರಾಜ್ಯ ಬಿಜೆಪಿ ಸರ್ಕಾರ ಜನರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ವರುಣ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಪ್ರವಾಸ ಕೈಗೊಂಡು ಕಾರ್ಯಕರ್ತರ ಜತೆ ಸಮಾಲೋಚಿಸಿ ಬಳಿಕ  ಮಾಧ್ಯಮಗಳ ಜತೆ ಮಾತನಾಡಿದರು.

ನಿನ್ನೆ ನಡೆದ ಕೊಲೆಗಳ ಪ್ರಕರಣಗಳಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾತೆತ್ತಿದರೆ ಬಿಜೆಪಿ ನಾಯಕರುಗಳು ಕಾಂಗ್ರೆಸ್ ಪಕ್ಷದ ವಿರುದ್ಧ ಆಪಾದನೆ ಮಾಡುವುದನ್ನು ಬಿಟ್ಟು ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ,  ಸೂಕ್ತ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ನಾಯಕರುಗಳಿಗೆ ತಿರುಗೇಟು ನೀಡಿದರು.

ಈ ಸಂದರ್ಭದಲ್ಲಿ ಯುವ ನಾಯಕ ಸುನಿಲ್ ಬೋಸ್, ಹೆಜ್ಜಿಗೆ ಇಂಧನ ಬಾಬು, ಬಿಪಿ ಮಹದೇವು ತರಗನಹಳ್ಳಿ ನಂಜುಂಡಸ್ವಾಮಿ, ಚಿನ್ನದ ಗುಡಿ  ಹುಂಡಿ ಬಸವೇಗೌಡ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Key words: BJP-government-failed –maintain- law and order- MLA- Yatindra Siddaramaiah.