ಕರ್ನಾಟಕದಲ್ಲಿನ ಘಟನೆಗಳಿಗೆ  ಬಿಜೆಪಿ ಸರ್ಕಾರವೇ ಕಾರಣ- ಮಲ್ಲಿಕಾರ್ಜುನ ಖರ್ಗೆ ಆರೋಪ.

Promotion

ನವದೆಹಲಿ,ಫೆಬ್ರವರಿ,11,2022(www.justkannada.in):  ಕರ್ನಾಟಕದಲ್ಲಿನ ಘಟನೆಗಳಿಗೆ ಬಿಜೆಪಿ ಸರ್ಕಾರವೇ ಕಾರಣ. ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ರಾಜ್ಯಸಭೆ  ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.  

ರಾಜ್ಯದಲ್ಲಿನ ಹಿಜಾಬ್ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಪ್ರಸ್ತುತ ಕರ್ನಾಟಕದಲ್ಲಿ ಆಗುತ್ತಿರುವ ವಿವಾದಗಳಿಗೆ  ಬಿಜೆಪಿಯೇ ಹೊಣೆ. ಮುಂಬರುವ ಚುನಾವಣೆ ಗುರಿಯಾಗಿರಿಸಿಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಪಸ್ಥಿತರಿದ್ದರು. ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಐಕ್ಯತೆ ಕುರಿತು ಸಮಸ್ಯೆಗಳನ್ನು ಎತ್ತಿದ್ದೇವೆ. ಆದರೆ ಪ್ರಧಾನಿಯವರು ವಿಷಯವನ್ನು ಬೇರೆಡೆಗೆ ತಿರುಗಿಸಿ ಕಾಂಗ್ರೆಸ್ ವಿರುದ್ಧ ನಿಂದನೆ ಮಾಡಿದ್ದಾರೆ. ಅವರು ಸಂಸತ್ತಿನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಾರೆ ಎಂದು ಕಿಡಿಕಾರಿದರು.

Key words: BJP government-responsible -Mallikarjuna kharge