ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ? : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು,ಮಾರ್ಚ್,21,2021(www.justkannada.in) : ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.jkಪ್ರಧಾನಿ ನರೇಂದ್ರಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ?ಮೋದಿ ಉತ್ತರಿಸುವರೇ? ಎಂದು ಟೀಕಿಸಿದ್ದಾರೆ.

ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ

ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರ

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, ‘ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,’ಎಂದಿದ್ದಾರೆ ಅವರು. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರ ಎಂದಿದ್ದಾರೆ.

BJP government,self,proclaimed,great,one,party,Modi,talking,about?,Former CM,H.D.Kumaraswamy,Question

ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ 1-2 ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದಿದ್ದಾರೆ.

ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಪ್ರಶ್ನಿಸಿದ್ದಾರೆ.

ಹಾಫ್ಕಿನ್ ರವರಿಗೆ ಜನ್ಮದಿನದ ಶುಭಾಶಯಗಳು

ಇಂದು 120 ವರ್ಷಗಳ ಹಿಂದೆ ಕಾಲರಾ, ಪ್ಲೇಗ್ ಗಳಿಂದ ಭಾರತೀಯರನ್ನು ಕಾಪಾಡಿದ ವ್ಲಾಡಿಮೀರ್ ಹಾಫ್ಕಿನ್ ಜನ್ಮದಿನ. ಇಂದು ಜಗತ್ತು ಕೊರೋನಾ ವೈರಸ್ ದಾಳಿಯ ಭಯದಲ್ಲಿರುವಂತೆ ಈ ಹಿಂದೆಯೂ ಕಾಲರಾ, ಪ್ಲೇಗ್ ದಾಳಿಗೆ ತುತ್ತಾಗಿತ್ತು. ಇಂತಹ ಸಂಧರ್ಭದಲ್ಲಿ ಜೀವ ಭಯ ತೊರೆದು ದುಡಿದ ವೈದ್ಯ ವಿಜ್ಞಾನಿಗಳಲ್ಲಿ ರಷ್ಯಾದ ವ್ಲಾಡಿಮೀರ್ ಹಾಫ್ಕಿನ್ ಪ್ರಮುಖರು.

BJP government,self,proclaimed,great,one,party,Modi,talking,about?,Former CM,H.D.Kumaraswamy,Question

ನಮ್ಮ ಮುತ್ತಾತಂದಿರನ್ನು ಕಾಲರಾ -ಪ್ಲೇಗ್ ದಾಳಿಯಿಂದ ರಕ್ಷಿಸಿ ಇಂದು ನಮ್ಮ ಇರುವಿಕೆಗೆ ಕಾರಣರಾಗಿರುವ ಹಾಫ್ಕಿನ್ ರವರಿಗೆ ಜನ್ಮದಿನದ ಶುಭಾಶಯಗಳು. ನಮ್ಮ ನಾಯಕರುಗಳಿಗೆ ಇವರ ಸೇವೆ ಆದರ್ಶವಾಗಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

key words : BJP government-self-proclaimed-great-one-party-Modi-talking- about?-Former CM-H.D.Kumaraswamy-Question