ಬಿಜೆಪಿ ಸರ್ಕಾರ ವಜಾಗೊಳಿಸುವಂತೆ ಆಗ್ರಹ: ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ…

Promotion

ಮೈಸೂರು,ನ,4,2019(www.justkannada.in):  ಸಮ್ಮಿಶ್ರ ಸರ್ಕಾರ ಬೀಳಿಸುವಲ್ಲಿ ಬಿಜೆಪಿ ಕುತಂತ್ರ ಬಯಲಾಗಿದೆ. ಬಿಜೆಪಿ ಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಇಂದು ಪ್ರತಿಭಟನೆ ನಡೆಸಿತು.

ಮೈಸೂರಿನ ಗಾಂಧಿ ಚೌಕದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಜಮಾಯಿಸಿ  ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್,  ಸಮ್ಮಿಶ್ರ ಸರ್ಕಾರ ಬೀಳಿಸುವಲ್ಲಿ ಬಿಜೆಪಿ ಕುತಂತ್ರ ಬಯಲಾಗಿದೆ. ಈ ಬಗ್ಗೆ ಸತಃ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಈ ಕೃತ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮುಖ್ಯಪಾತ್ರ ವಹಿಸಿರುವುದು ಬಹಿರಂಗವಾಗಿದೆ. ಹಾಗಾಗಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾಸಕ ತನ್ವೀರ್ ಸೇಠ್ , ಮಾಜಿ ಶಾಸಕ ಎಂಕೆ ಸೋಮಶೇಖರ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್,  ಪುಷ್ಪಲತಾ ಅಮರನಾಥ್ ಸೇರಿ ಹಲವರು ಭಾಗಿಯಾಗಿದ್ದರು.

Key words: BJP govt- dismissal-Congress -protests – Mysore