ಸಂಪುಟ ಸೇರಲು ಉತ್ಸುಕರಾಗಿರುವ ಶಾಸಕರಿಗೆ ಬಿಜೆಪಿ ಹೈಕಮಾಂಡ್’ನಿಂದ ಸಿಹಿ ಸುದ್ದಿ !

Promotion

ಬೆಂಗಳೂರು, ಆಗಸ್ಟ್ 1, 2021 (www.justkannada.in): ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ನಾಳೆ ದೆಹಲಿಗೆ ಸಿಎಂ ಬೊಮ್ಮಾಯಿ ತೆರಳುವ ಸಾಧ್ಯತೆ ಇದೆ.

ಮತ್ತೆ ದೆಹಲಿಗೆ ಬರುವಂತೆ ಹೈಕಮಾಂಡ್ ನಿಂದ ಕರೆ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಲು ಸಿಎಂ ಬೊಮ್ಮಾಯಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಗಳು ಆಗಬೇಕಾಗಿದೆ. ಮತ್ತೊಂದೆಡೆ ಕೊರೊನಾ ಮೂರನೇ ಅಲೆ ಅಪ್ಪಳಿಸುವ ಆತಂಕ ಕೂಡ ಎದುರಾಗಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಶೀಘ್ರ ರಚನೆ ಆಗಲೇಬೇಕಾಗಿದೆ.

ಸಂಪುಟ ಸೇರಲು ಉತ್ಸುಕರಾಗಿರುವ ಶಾಸಕರಿಗೆ ಸಿಹಿ ಸುದ್ದಿಯನ್ನು ಹೈಕಮಾಂಡ್ ಕೊಟ್ಟಿದೆ. ಸೋಮವಾರ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚನೆ ಬಂದಿದೆ ಎನ್ನಲಾಗುತ್ತಿದೆ.