ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ: ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಪ್ರತಿಕ್ರಿಯೆ ಏನು..?

Promotion

ಚಿಕ್ಕಮಗಳೂರು,ಜುಲೈ,15,2023(www.justkannada.in): ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಎಂಬ ವಿಚಾರ ಸುದ್ದಿಯಾಗುತ್ತಿದ್ದು ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು. ಭಾರತಕ್ಕೆ ಎದ್ದು ನಿಂತು ಗೌರವ ನೀಡುತ್ತಿರುವುದು ಪ್ರಧಾನಿ ಮೋದಿ ಅವರ ಕಾರಣಕ್ಕೆ. ನರೇಂದ್ರ ಮೋದಿ ಅವರಿಗೆ ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಎಲ್ಲಾ ರಾಜಕೀಯ ಪಾರ್ಟಿಯಲ್ಲೂ ಇದೆ. ಇದೆ ಅಪೇಕ್ಷೆಯನ್ನ ಜೆಡಿಎಸ್​ನಿಂದ ನಿರೀಕ್ಷೆ ಮಾಡುತ್ತೇವೆ ಎಂದಿದ್ದಾರೆ.

ದೇಶದಲ್ಲಿರುವ ರಾಜಕೀಯ ಪಕ್ಷಗಳು ಪ್ರಧಾನಿ ಮೋದಿ ಜೊತೆ ಜೋಡಣೆ ಆಗುತ್ತಿದೆ. ಭಾರತ ನೂರನೇ ವರ್ಷದ ಸಂಭ್ರಮಾಚರಣೆಯ ದಿನ ವಿಶ್ವದಲ್ಲೇ ನಂಬರ್ ಓನ್ ಆಗಿರಬೇಕು ಎಂಬುದು ಮೋದಿ ಅವರ ಆಸೆ ಎಂದು ಶೋಭಾಕರಂಧ್ಲಾಜೆ ತಿಳಿಸಿದ್ದಾರೆ.

Key words: BJP-JDS- alliance – LokSabha –elections-Union Minister- Shobha Karandhlaje