ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ: ಎಲ್ಲಾ ಬಿಜೆಪಿ ಶಾಸಕರಿಗೂ ತುರ್ತು ಬುಲಾವ್.

Promotion

ಬೆಂಗಳೂರು,ಜುಲೈ,27,2021(www.justkannada.in): ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿಗಾಗಿ ಹಲವರು ಲಾಬಿ ನಡೆಸುತ್ತಿದ್ದು ಈ ಮಧ್ಯೆ  ಇಂದು ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ.jk

ರಾಜಭವನ ರಸ್ತೆಯ ಕ್ಯಾಪಿಟಲ್ ಹೋಟೆಲ್ ನಲ್ಲಿ ಸಂಜೆ ಏಳು ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.  ಬಿಜೆಪಿ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರಿಗೂ ತುರ್ತು ಬುಲಾವ್ ಕಳಿಸಲಾಗುತ್ತಿದೆ. ಬಿಜೆಪಿ ಕಚೇರಿ ಸಿಬ್ಬಂದಿ ಶಾಸಕರಿಗೆ ಕರೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ನೂತನ ಸಿಎಂ ಆಯ್ಕೆ ವಿಚಾರವಾಗಿ ಚರ್ಚೆ ನಡೆಯಲಿದ್ದು ಬಳಿಕ ನೂತನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ನೂತನ ಸಿಎಂ ಆಯ್ಕೆ ಸಂಬಂಧ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಅವರನ್ನ ಬಿಜೆಪಿ ಸಂಸದೀಯ ಮಂಡಳಿ ನೇಮಕ ಮಾಡಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲು ಇದೀಗ ಕಿಶಾನ್ ರೆಡ್ಡಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

 

Key words: BJP -Legislative Assembly –meeting- at 7 pm-Bulav – MLAs