ಅಧಿಕಾರದ ಆಸೆಯಿಂದ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ.

Promotion

ಬೆಂಗಳೂರು,ಜನವರಿ,27,2022(www.justkannada.in):   ಸಚಿವ ಸಂಪುಟ ವಿಸ್ತರಣೆಗಾಗಿ ಸಚಿವಾಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿಕಾರ ಸಿಗುತ್ತೆ ಅಂತಾ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯಿಂದ ಬಹಳ ಜನ ಹೋಗ್ತಾರೆ ಎಂಬ ಮಾತು ಕೇಳಿಬಂದಿದ್ದು ಒಳ್ಳೇದಾಯ್ತು. ಸಚಿವ ಸೋಮಶೇಖರ್ ಸೇರಿ ಹಲವರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಅದೇ ಹೇಳಿಕೆಯನ್ನು ತೋರಿಸಿ, ಪಕ್ಷವನ್ನು ಗಟ್ಟಿ ಮಾಡುತ್ತಿವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಇನ್ನು ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಪ್ರಸ್ತುತ ಕಾಂಗ್ರೆಸ್​ನಲ್ಲಿರುವ ಸಿ.ಎಂ.ಇಬ್ರಾಹಿಂ ಯಾವಾಗ ಏನು ಮಾತನಾಡುತ್ತಾರೋ ಗೊತ್ತಿಲ್ಲ. ಅವರದ್ದು ಮತ್ತು ಕಾಂಗ್ರೆಸ್ ​ನವರದ್ದು ಏನೇನಿದೆಯೋ ನನಗೆ ಗೊತ್ತಿಲ್ಲ. ಅವರು ಒಮ್ಮೆ ದೇವೇಗೌಡರನ್ನು ಅಪ್ಪ ಎನ್ನುತ್ತಾರೆ, ಇನ್ನೊಮ್ಮೆ ಸಿದ್ದರಾಮಯ್ಯ ಅವರನ್ನು ಅಣ್ಣ ಎನ್ನುತ್ತಾರೆ. ರಾಜಕೀಯದಲ್ಲಿ ಹೀಗೆ ಅಪ್ಪ-ಅಣ್ಣ ಎನ್ನುವವರು ಭಾರೀ ಡೇಂಜರ್ ಎಂದು ಹೇಳಿದರು.

Key words: bjp-MLA-Basanagowda patil yatnal