ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಬಿಜೆಪಿ ಶಾಸಕ ಆಗ್ರಹ…

Promotion

ಬೆಂಗಳೂರು,ಮಾರ್ಚ್,16,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಸ್ವಪಕ್ಷದ ಶಾಸಕರೇ ಆದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕರು ಮುಗಿಬಿದ್ದಿದ್ದಾರೆ.jk

ಶಾಸಕ ಎಂ. ಪಿ ರೇಣುಕಾಚಾರ್ಯ ಮಾತನಾಡಿ ಯತ್ನಾಳ್  ಉಚ್ಛಾಟನೆಗೆ ಆಗ್ರಹಿಸಿದ್ದರು. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಿಡಿಕಾರಿದ್ದಾರೆ.

ಪದೇಪದೆ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆ ನೀಡುತ್ತಿರುವ ಯತ್ನಾಳ್ ಶಿಸ್ತುಕ್ರಮ ಕೈಗೊಳ್ಳಲು ಪಕ್ಷದ ವರಿಷ್ಠರಿಗೆ ಒತ್ತಾಯಿಸುತ್ತೇವೆ‌ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.BJP MLA -demands –action- against -Basanagowda Patil Yatnal

ಕೂಡಲೇ ಯತ್ನಾಳ್ ರನ್ನ ಪಕ್ಷದಿಂದ ಉಚ್ಛಾಟಿಸಬೇಕು. ಇದಕ್ಕಾಗಿ ಶಾಸಕಾಂಗ ಸಭೆ ಕರೆಯಲಿ ನಾವು ಶಾಸಕಾಂಗ ಸಭೆಯಲ್ಲಿ ಮಾತನಾಡುತ್ತೇವೆ. ಯತ್ನಾಳ್ ವಿರುದ್ದ ಶಿಸ್ತುಕ್ರಮ ಕೈಗೊಳ್ಳದಿದ್ದರೇ ವರಿಷ್ಠರಿಗೆ ದೂರು ನೀಡುವುದಾಗಿ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದ್ದಾರೆ.

Key words: BJP MLA -demands –action- against -Basanagowda Patil Yatnal