ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್.

ರಾಯಚೂರು,ಜನವರಿ,11,2023(www.justkannada.in):  ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಮತ್ತೆ ಕಾಂಗ್ರೆಸ್ ಗೂಡಿಗೆ ಸೇರ್ಪಡೆಯಾಗುತ್ತಿದ್ದಾರೆ.

ಹೌದು, ಈ ಬಗ್ಗೆ ಸ್ವತಃ ಹೆಚ್.ವಿಶ್ವನಾಥ್ ಅವರೇ ಖಚಿತಪಡಿಸಿದ್ದಾರೆ. ಈ ಕುರಿತು ರಾಯಚೂರಿನಲ್ಲಿ ಮಾತನಾಡಿರುವ ಹೆಚ್.ವಿಶ್ವನಾಥ್, ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ.  ಉತ್ತರಾಯಣದಂದು ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ.  ಅದಕ್ಕಾಗಿಯೇ ರಾಯರ ದರ್ಶನ ಪಡೆದಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಸೇರ್ಪಡೆ ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಹೆಚ್.ವಿಶ್ವನಾಥ್ ಹುಣಸೂರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಇವರನ್ನ ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡು ಹೆಚ್.ವಿಶ್ವನಾಥ್ ಸೇರಿ 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ ಮೂಲಕ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ನಂತರ ಹೆಚ್.ವಿಶ್ವನಾಥ್ ಉಪಚುನಾವಣೆಯಲ್ಲಿ ಸೋತರೂ ಬಿಜೆಪಿ ಎಂಎಲ್ ಸಿಯನ್ನಾಗಿ ಮಾಡಲಾಗಿತ್ತು. ಆದರೆ  ಇತ್ತೀಚೆಗೆ ಬಿಜೆಪಿಯ ಜೊತೆಯಲ್ಲೂ ಅಂತರ ಕಾಯ್ದುಕೊಂಡಿದ್ದ ಹೆಚ್.ವಿಶ್ವನಾಥ್ ಅವರು ಸಿದ್ಧರಾಮಯ್ಯರನ್ನ ಭೇಟಿಯಾಗಿದ್ದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದರು.

Key words: BJP –MLC- H. Vishwanath- confirmed -joining – Congress