ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾಗಿ ಹೆಚ್.ವಿಶ್ವನಾಥ್ ಮಾತುಕತೆ.

Promotion

ಮೈಸೂರು,ಜನವರಿ,27,2023(www.justkannada.in): ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಸುಳಿವು ನೀಡಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾದ ಎಂಎಲ್ ಸಿ ಹೆಚ್.ವಿಶ್ವನಾಥ್ ಮಾತು ಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಸಿಎಂ ಬೊಮ್ಮಾಯಿ ಮತ್ತು ಸಚಿವರ ವಿರುದ್ಧ ಸರ್ಕಾರದ ವೈಪಲ್ಯಗಳ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ಹಾಗೆಯೇ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ ಎಂದು ಸಹ ಹೇಳಿಕೆ ನೀಡಿದ್ದರು. ಜೊತೆ ಇತ್ತೀಚೆಗೆ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ರನ್ನೂ ಭೇಟಿಯಾಗಿದ್ದರು.

Key words: BJP-MLC-H. Vishwanath – state Congress- in-charge -Randeep Singh Surjewala.