ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಚಾರಣೆ ನಡೆಸಿದ ದೆಹಲಿ ಪೊಲೀಸರು.

ನವದೆಹಲಿ,ಜುಲೈ,5,2022(www.justkannada.in):  ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನ ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಹೌದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನೆ ಎದುರು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾದ ಎಂಟು ಸದಸ್ಯರನ್ನು ಬಂಧಿಸಲಾಗಿತ್ತು. ದೆಹಲಿ ಪೊಲೀಸರು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು 2 ಗಂಟೆಗಳ  ಕಾಲ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ತನಿಖಾಧಿಕಾರಿ ವಾಟ್ಸಾಪ್‌ ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಎರಡು ನೋಟಿಸ್‌ ಗಳನ್ನು ನೀಡಿದ್ದರು. ಈ ಮಧ್ಯೆ  ದೆಹಲಿಗೆ ಬಂದಾಗ ತನಿಖೆಗೆ ಹಾಜರಾಗುವುದಾಗಿ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದರು.

Key words: BJP -MP -Tejaswi Surya -questioned – Delhi Police.