ಶರತ್ ಬಚ್ಚೇಗೌಡ ಬಿಜೆಪಿ ಸೇರ್ಪಡೆ ಮಾತೇ ಇಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ

Promotion

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಬಂಡಾಯ ಅಭ್ಯರ್ಥಿಯಾಗಿ ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ.

ಶರತ್ ಬಚ್ಚೇಗೌಡ ಪಕ್ಷದ ಮಾತಿಗೆ ಬೆಲೆ ಕೊಡದೇ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಹೀಗಾಗಿ ನಾ ಇರುವವರೆಗೂ ಅವರಿಗೆ ಬಿಜೆಪಿ ಪಕ್ಷದ ಒಳಗೆ ಮತ್ತೆ ಪ್ರವೇಶವಿಲ್ಲ. ಯಾವುದೇ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಎಂಟಿಬಿ ನಾಗರಾಜ್ ಗೆ ಸಿಎಂ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಚ್ಚೇಗೌಡ ಒಪ್ಪಿಗೆ ಸೂಚಿಸಿದ ನಂತರವೇ ಎಂಟಿಬಿ ನಾಗರಾಜ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿತ್ತು. ಆದರೂ, ಹಿರಿಯ ನಾಯಕರ ಮಾತಿಗೆ ಬೆಲೆ ಕೊಡದೆ ಶರತ್ ಬಚ್ಚೇಗೌಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಎಂಟಿಬಿ ನಾಗರಾಜ್ ಸೋಲಿಗೆ ಕಾರಣರಾಗಿದ್ದಾರೆ.