ಶಾಸಕರ ರಾಜೀನಾಮೆಗೆ ರಾಹುಲ್ ಗಾಂಧಿ ಪ್ರೇರಣೆ: ಕುದುರೆ ವ್ಯಾಪಾರದಲ್ಲಿ ಬಿಜೆಪಿ ಭಾಗಿಯಾಗಿಲ್ಲ- ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ…

ನವದೆಹಲಿ,ಜು,8,2019(www.justkannada.in):  ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಮೈತ್ರಿ ಪಕ್ಷದ ಶಾಸಕರನ್ನ ಸೆಳೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನ ಕಾಂಗ್ರೆಸ್  ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಿಜೆಪಿ ವಿರುದ್ದ ಕಿಡಿಕಾರಿ ಧರಣಿ ನಡೆಸಿತು. ಈ ಕುರಿತು ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ , ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೂ, ಬಿಜೆಪಿಗೂ ಸಂಬಂಧವಿಲ್ಲ. ನಮ್ಮ ಪಕ್ಷವು ಬೇರೆ ಯಾವುದೇ ಪಕ್ಷದ ಶಾಸಕರ ಮೇಲೆ ಒತ್ತಡ ಹೇರಿಲ್ಲ. ಈ ರಾಜೀನಾಮೆ ನಾಟಕ ಪ್ರಾರಂಭಿಸಿದ್ದೇ ರಾಹುಲ್ ಗಾಂಧಿ. ರಾಹುಲ್ ಗಾಂಧಿ ಪ್ರೇರಣೆಯಿಂದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.

ನಮ್ಮ ಪಕ್ಷ ಎಂದಿಗೂ ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ. ಸಂಸದೀಯ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ರಾಜನಾಥ್ ಸಿಂಗ್ ಸ್ಪಷ್ಟನೆ ನೀಡಿದರು.

Key words: BJP -not involved -horse trading-Union Defense Minister- Rajnath Singh