ಅಮಿತ್ ಶಾ ಭೇಟಿಗೆ ರಾಜ್ಯ ಬಿಜೆಪಿ ನಾಯಕರಿಗೆ ಸಮಯ ನಿಗದಿ…

Promotion

ಬೆಂಗಳೂರು,ಜ,18,2020(www.justkannada.in): ಇಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿಲಿದ್ದು ಈ ವೇಳೆ  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತೇನೆ ಎಂದು ಸಿಎಂ ಬಿಎಸ್ ಹೇಳಿದ್ದಾರೆ. ಈ ಸಂಬಂಧ ಇಂದು ಸಂಜೆ ಬಿಜೆಪಿ ನಾಯಕರಿಂದ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ.

ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡುತ್ತಿದ್ದು ಇಂದು ಸಂಜೆ 6.30ರಿಂದ 7030ರವರೆಗೆ ಅಮಿತ್ ಶಾ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ.  ಆದರೆ ಇಂದು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಕಷ್ಟವಾಗಿದೆ.

ನಿಗದಿ ಮಾಡಿರುವ ಒಂದು ಗಂಟೆ ಅವಧಿಯಲ್ಲಿ ಸಂಪುಟ ವಿಸ್ತರಣೆ ಕಗ್ಗಂಟು ಬಗೆ ಹರಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

Key words: bjp president-Amit Shah –visits- state -BJP leaders