ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ.

Promotion

ನವದೆಹಲಿ ,ಜನವರಿ,14,2023(www.justkannada.in):ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತು ಇಂದು ನಡೆದ  ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಿದೆ.

ಜೂನ್ 2024 ರವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಿಸಲಾಗಿದ್ದು, ಈ ಕುರಿತು ಗೃಹ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.  ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲಾಗಿದ್ದು, ಈ ನಿರ್ಧಾರವನ್ನ ಬಿಜೆಪಿ ಕಾರ್ಯಕಾರಿಣಿ ಅಂಗೀಕರಿಸಿದೆ. ಮುಂದಿನ ಲೋಕಸಭೆ ಚುನಾವಣೆಯನ್ನ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಜೆಪಿ  ನಡ್ಡಾ ಜನವರಿ 2020 ರಲ್ಲಿ ಮೂರು ವರ್ಷಗಳ ಅವಧಿಗೆ ಪಕ್ಷದ ಮುಖ್ಯಸ್ಥರಾದರು. ಅವರ ಅಧಿಕಾರಾವಧಿ ಈ ತಿಂಗಳು ಕೊನೆಗೊಳ್ಳಬೇಕಿತ್ತು. ಈಗ ಪಕ್ಷವು ಸಾರ್ವತ್ರಿಕ ಚುನಾವಣೆಯ ನಂತರ ಅವಧಿಯನ್ನ 2024 ರವರೆಗೆ ವಿಸ್ತರಿಸಿದೆ.

Key words: BJP- President- JP Nadda- tenure–extension