ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನ

Promotion

ಬೆಂಗಳೂರು.ಸೆಪ್ಟಂಬರ್,17,2020(www.justkannada.in):  ಮಹಾಮಾರಿ ಕರೊನಾ ವೈರಸ್​ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ​ ಗಸ್ತಿ (55) ನಿಧನರಾಗಿದ್ದಾರೆ.jk-logo-justkannada-logo

ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ​ ಗಸ್ತಿ ನಿಧನರಾಗಿದ್ದಾರೆ. ಕೊರೋನಾಗೆ ತುತ್ತಾಗಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ರಾಯಚೂರು ಮೂಲದ ಅಶೋಕ ಗಸ್ತಿಯವರು ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರ ಜತೆಯಲ್ಲಿಯೇ ಸಂಸತ್ತು ಪ್ರವೇಶಿಸಿದ್ದರು.

ಗಸ್ತಿಯವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪತ್ನಿ ಹಾಗೂ ಪುತ್ರಿಯರಿಗೂ ಕರೊನಾ ಸೋಂಕು ತಗುಲಿದ್ದು, ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.

key words: BJP -Rajya Sabha -member -Ashok Gasti -passes away