ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ.

Promotion

ಬೆಂಗಳೂರು,ಏಪ್ರಿಲ್,19,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಚಾರದ ಭರಾಟೆ ಜೋರಾಗಿದ್ದು, ಬಿಜೆಪಿಯು ತನ್ನ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ.  ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ,  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಟಿ.ರವಿ, ಅಣ್ಣಾಮಲೈ, ಸಂಸದ ಜಗ್ಗೇಶ್​​, ಶೃತಿ, ತಾರಾ ಸೇರಿದಂತೆ ಹಲವರನ್ನು ಸ್ಟಾರ್ ಪ್ರಚಾರಕ್ಕೆ ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ರೋಡ್ ಶೋಗಳು, ಸಾರ್ವಜನಿಕ ರ್ಯಾಲಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಗಳು ಸೇರಿದಂತೆ ಒಟ್ಟು 15-20 ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.

Key words: BJP -releases -list – 40 star campaigners.