ಬಿಜೆಪಿಯಲ್ಲಿ ಕೆಲವರಿಗೆ ಅಸಮಾಧಾನ ಇರೋದು ನಿಜ- ಸಚಿವ ಮುರುಗೇಶ್ ನಿರಾಣಿ.

Promotion

ಕಲ್ಬುರ್ಗಿ,ಜೂನ್,22,2021(www.justkannada.in): ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ಅಸಮಾಧಾನ ಇರೋದು ನಿಜ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ನಮ್ಮದು ದೊಡ್ಡ ಪಕ್ಷ ಹೀಗಾಗಿ ಸ್ವಲ್ಪ ಅಸಮಾಧಾನ ಇರೋದು ಸಹಜ. ಆದರೆ ನಮ್ಮ ಹೈಕಮಾಂಡ್ ಸ್ಟ್ರಾಂಗ್ ಇದೆ. ಹೀಗಾಗಿ ಸಮಸ್ಯೆಗಳನ್ನ ಬಗೆಹರಿಸುತ್ತದೆ ಎಂದು ತಿಳಿಸಿದರು.

ರಾಜ್ಯ ನಾಯಕತ್ವದ ಬಗ್ಗೆ ಅರುಣ್ ಸಿಂಗ್ ಹೈಕಮಾಂಡ್ ಗೆ ವರದಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಮುರುಗೇಶ್ ನಿರಾಣಿ, ವರದಿ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದರು. ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಬಂದ ಹಿನ್ನೆಲೆ ಬಿಜೆಪಿಯಲ್ಲಿ ಗೊಂದಲ ಉಂಟಾಗಿತ್ತು. ಈ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿ ಮೂರು ದಿನಗಳ ಕಾಲ ಸಚಿವರು, ಬಿಜೆಪಿ ಶಾಸಕರ ಜತೆ ಸಭೆ ನಡೆಸಿ ಚರ್ಚಿಸಿ ನಂತರ ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

Key words: BJP -unhappy –someone-Minister -Murugesh Nirani.