ಯಾವುದೇ ಕಾರಣಕ್ಕೂ ರಾಜ್ಯದಲ್ಲಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ- ಹೆಚ್.ವಿಶ್ವನಾಥ್ ಭವಿಷ್ಯ.

ಬೆಂಗಳೂರು,ಏಪ್ರಿಲ್,10,2023(www.justkannada.in): ಯಾವುದೇ ಕಾರಣಕ್ಕೂ ರಾಜ್ಯದಲ್ಲಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್,  ಕಳೆದ ಸಲ ಅಪರೇಷನ್ ಕಮಲದಿಂದ ಬಿಜೆಪಿ ಅಧಿಕಾರಕ್ಕೆ ಬಂತು.  ಈ ಸಾರಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದಕ್ಕೆ ನಾನು ಪ್ರಾಯಶ್ಚಿತ ಮಾಡಿಕೊಂಡಿದ್ದೇನೆ. ಅವರ ಭ್ರಷ್ಟಾಚಾರಕ್ಕೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಭವಿಷ್ಯವಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿ ಅಥವಾ ಅಮಿತ್ ಶಾ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದರು.

Key words: BJP -will not -come – power- H. Vishwanath