“ಬಿಜೆಪಿ ಎಂದರೆ ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕೆ

Promotion

ಬೆಂಗಳೂರು,ಜನವರಿ,14,2021(www.justkannada.in) : ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ’ ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.jk-logo-justkannada-mysore

ಬಿಜೆಪಿ ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಹೇಳಿದ್ದಾರೆ.BJP,means,Black,Mayors,Janata,Party,President,KPCC,D.K.Shivakumar,Criticism

ಕೋವಿಡ್ ಸಂಕಷ್ಟದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆಯಲ್ಲಿ ತೆರಿಗೆ ಹಾಕುವ ಕಾನೂನು ತಂದಿರುವುದು ಜನರ ಸುಲಿಗೆ ಮಾಡುವ ಕ್ರಮ. ತಿಂಗಳಲ್ಲಿ ಮೂರು ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಆಗಿದೆ ಇವುಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

key words : BJP-means-Black-Mayors-Janata-Party-President-KPCC-D.K.Shivakumar-Criticism