ಲಾಕ್ ಡೌನ್ ಮುಗಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ ಗ್ಯಾರಂಟಿ!

Promotion

ಬೆಂಗಳೂರು, ಜೂನ್ 08, 2021 (www.justkannada.in): ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಸಂಬಂಧ ಚರ್ಚೆ ನಡೆದಿದೆ.

ಡೀಸೆಲ್ ಬೆಲೆ ಏರಿಕೆ, ನೌಕರರ ಮುಷ್ಕರ ಮತ್ತು ಲಾಕ್ಡೌನ್ ಮೊದಲಾದ ಕಾರಣಗಳಿಂದ ಸಾರಿಗೆ ಸಂಸ್ಥೆ ಸಂಕಷ್ಟದಲ್ಲಿದೆ. ಹೀಗಾಗಿ ಬಸ್ ದರ ಹೆಚ್ಚಳ ಸಾಧ್ಯತೆ ಇದೆ ಎನ್ನಲಾಗಿದೆ.

ಲಾಕ್ ಡೌನ್ ತೆರವಾಗುತ್ತಿದ್ದಂತೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬಿಎಂಟಿಸಿ ರೀತಿಯಲ್ಲಿ ಬೇರೆ ಸಾರಿಗೆ ಸಂಸ್ಥೆಗಳು ಕೂಡ ಡೀಸೆಲ್ ಬೆಲೆ ಭಾರೀ ಏರಿಕೆ ಕಾರಣದಿಂದ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.