ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್.

Promotion

ಬೆಂಗಳೂರು,ಅಕ್ಟೋಬರ್,10,2022(www.justkannada.in): ಬಸ್ ಹತ್ತುವಾಗ ಆಯತಪ್ಪಿ ಬಿದ್ಧ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಈ ಘಟನೆ ನಡೆದಿದೆ.  ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು  ನಾಗರಬಾವಿ ಪೊರ್ಟೀಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಹತ್ತುವಾಗ ಬಸ್  ಮುಂದಕ್ಕೆ ಚಲಿಸಿದ್ದು ಈ ವೇಳೆ ವಿದ್ಯಾರ್ಥಿನಿ ಶಿಲ್ಪಾ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಬಸ್ ಹರಿದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.  ಬಸ್ ಅಪಘಾತ ಖಂಡಿಸಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು . ಬಸ್ ಚಾಲಕನನ್ನ ಬಂಧಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

Key words: BMTC -bus- student – fell down-accident