ಬಿಎಂಟಿಸಿ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ- ಸಚಿವ ಶ್ರೀರಾಮುಲು.

Promotion

ಬೆಂಗಳೂರು,ಡಿಸೆಂಬರ್,14,2022(www.justkannada.in):  ಸಾರಿಗೆ ಸಚಿವ ಶ್ರೀರಾಮುಲು ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಬಿಎಂಟಿಸಿ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆಯನ್ನ ಘೋಷಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಸಾರಿಗೆ ಸಚಿವ ಶ್ರೀರಾಮುಲು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಘೋಷಿಸಲಾಗಿದೆ. ಈ ಯೋಜನೆಯಡಿ ನೌಕರರು ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಬಹುದು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆಯುಷ್ಮಾನ್ ಯೋಜನೆಯಡಿ 5 ಲಕ್ಷ ಆರೋಗ್ಯ ವಿಮೆ ನೀಡುತ್ತಿದೆ ಎಂದಿದ್ದಾರೆ.

ನಿಗಮದ ಸಿಬ್ಬಂದಿಗಳು ಹಾಗೂ ಕುಟುಂಬದವ್ರು ಯಾವುದೇ ಅನಾರೋಗ್ಯಕ್ಕೊಳಗಾದರೆ ಈ ಯೋಜನೆಯಡಿ ಅವರು ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಸಚಿವರು ಹಾಗೂ ಇಲಾಖೆ ಜೊತೆ ಈಗಾಗಲೇ ಬಿಎಂಟಿಸಿ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

ದೀರ್ಘ ಕಾಲಿಕ ರೋಗ, ಹೃದಯ ಬೈಪಾಸ್ ಸರ್ಜರಿ ಸೇರಿ ಹಲವು ಕಾಯಿಲೆಗಳಿಂದ ನೌಕರರು ಬಳಲುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ನೌಕರರಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿರುವ ಹಿನ್ನಲೆ ಆರೋಗ್ಯ ವಿಮೆ ಯೋಜನೆಗೆ ಬಿಎಂಟಿಸಿ ನಿರ್ಧರಿಸಿದೆ ಎನ್ನಲಾಗಿದೆ.

Key words: BMTC employees-5 lakhs – Health insurance-  Minister -Sriramulu