ಮುಂಬೈನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ.

Promotion

ಮುಂಬೈ,ಆಗಸ್ಟ್,23,2022(www.justkannada.in):  ವಾಣಿಜ್ಯ ನಗರಿ ಮುಂಬೈನ  ಪ್ರತಿಷ್ಠಿತ ಹೋಟೆಲೊಂದಕ್ಕೆ  ಅಪರಿಚಿತ ವ್ಯಕ್ತಿಯೊಬ್ಬನಿಂದ ಬಾಂಬ್  ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ  ಲಲಿತ್ ಹೋಟೆಲ್‌ ನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾನೆ. ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಬೇಕಿದ್ದರೆ ₹ 5 ಕೋಟಿ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾನೆ.

ಪ್ರಮುಖ ಹೋಟೆಲ್ ಸಂಬಂಧಿಸಿದ ಹುಸಿ ಬಾಂಬ್ ಬೆದರಿಕೆಯನ್ನು ಸೋಮವಾರ ಸಂಜೆ ಸ್ವೀಕರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದು, ಈ ಕುರಿತು ಮುಂಬೈ ಪೊಲೀಸರು ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: bomb -threat -call – prestigious hotel – Mumbai.