ಮೈಸೂರು ವಾಣಿಜ್ಯ ತೆರಿಗೆ ಕಚೇರಿಗೆ ಬಾಂಬ್ ಬೆದರಿಕೆ ಪತ್ರದ ಬಗ್ಗೆ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರಿಂದ ಸ್ಪಷ್ಟನೆ.

kannada t-shirts

ಮೈಸೂರು, ಸೆಪ್ಟೆಂಬರ್ 22, 2021 (www.justkannada.in): ಮೈಸೂರು ವಾಣಿಜ್ಯ ತೆರಿಗೆ ಕಚೇರಿಗೆ ಬಾಂಬ್ ಬೆದರಿಕೆ ಪತ್ರವೊಂದು ಆತಂಕಕ್ಕೆ ಕಾರಣವಾಗಿದೆ.

ಮೈಸೂರಿನ ದೇವರಾಜ ಮೊಹಲ್ಲಾದ ಬಿಡಾರಾಂ ಕೃಷ್ಣಪ್ಪ ರಸ್ತೆಯಲ್ಲಿರುವ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದು, ಇದರಿಂದ ಆತಂಕಗೊಂಡ ಸಿಬ್ಬಂದಿ, ಅಧಿಕಾರಿಗಳು ಹೆದರಿ ಹೊರಗೆ ಓಡಿ ಬಂದಿದ್ದಾರೆ.

ತಕ್ಷಣ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಬಾಂಬ್ ನಿಷ್ಕ್ರಿಯ ಸಿಬ್ಬಂದಿಯಿಂದ ತಪಾಸಣೆ ನಡೆಯುತ್ತಿದೆ. ಕಚೇರಿ ಸುತ್ತಮುತ್ತ ಇದ್ದ ಸಾರ್ವಜನಿಕನ್ನು ಪೊಲೀಸರು ದೂರ ಪ್ರದೇಶಕ್ಕೆ ಕಳುಹಿಸಿದ್ದಾರೆ. ಕಚೇರಿಯ ರಸ್ತೆಯ ಎರಡೂ ಕಡೆಗೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.

ನಮ್ಮ ಕಚೇರಿಗೆ ಬೆದರಿಕೆ ಕರೆ ಬಂದಿಲ್ಲ. ಪೊಲೀಸರಿಗೆ ನೇರವಾಗಿ ಬಾಂಬ್ ಇರಿಸಿರೋದಾಗಿ ದುಷ್ಕರ್ಮಿಗಳು ತಿಳಿಸಿದ್ದಾರೆ. ಕಾನ್ಸ್‌ಟೇಬಲ್ ಒಬ್ಬರು ಬಂದು ನನಗೆ ಮೆಸೇಜ್ ತೋರಿಸಿದರು. ಅದರಲ್ಲಿದ್ದ ವಿಳಾಸ ಹಾಗೂ ಅಕ್ಕಪಕ್ಕದ ಕಚೇರಿಗಳ ಹೆಸರು ನೋಡಿ ಖಾತರಿ ಮಾಡಿಕೊಂಡೆ. ಬೆಳಿಗ್ಗೆ 11.30ರ ಸುಮಾರಿಗೆ ಬಂದು ತಿಳಿಸಿದರು. ಆಗ ತಕ್ಷಣ ಮೀಟಿಂಗ್ ಬಿಟ್ಟು ನಾವು ಹೊರಗೆ ಬಂದೆವು. ಕಚೇರಿಯಲ್ಲಿ ಸುಮಾರು‌ 80 ಮಂದಿ ಸಿಬ್ಬಂದಿ ಇದ್ದರು ಎಂದು ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಲಕ್ಷ್ಮೀಪುರಂ ನಲ್ಲಿರುವ ಆಡಿಟರ್ ಕಚೇರಿ ಗೇಟ್ ನಲ್ಲಿ ಪತ್ರ ಸಿಕ್ಕಿದ್ದು, ಪತ್ರದಲ್ಲಿ ಮ.12 ರಿಂದ 1 ಗಂಟೆ ಒಳಗೆ ಕಚೇರಿಯಲ್ಲಿ ಸ್ಪೋಟವಾಗುವ ಬಗ್ಗೆ ಬೆದರಿಕೆಯೊಡ್ಡಲಾಗಿದೆ. ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಪಿ, ವಾಣಿಜ್ಯ ತೆರಿಗೆ ಕಚೇರಿ ಕಟ್ಟಡದ ಆವರಣದಲ್ಲಿದ್ದ ಲಾರಿ ಹಾಗೂ ವಾಹನಗಳು ಹೊರಕ್ಕೆ ಕಳುಹಿಸಿದ್ದಾರೆ.

ಮೈಸೂರಿನ ಬಿಡಾರಾಂ ಕೃಷ್ಣಪ್ಪ ರಸ್ತೆಯಲ್ಲಿರುವ ರಾಜ್ಯ ಸರಕು‌ ಮತ್ತು ಸೇವಾ ತೆರಿಗೆ ಆಯುಕ್ತರ ಕಚೇರಿಯಲ್ಲಿ ಪೊಲೀಸರಿಂದ ಕಚೇರಿ ಆವರಣದಲ್ಲಿ ತೀವ್ರ ಶೋಧ ಕಾರ್ಯ ನಡೆದಿದೆ.

key words: Bomb threat letter to Mysore Commercial Tax Office. Inspection by police, Bomb inactive squad

website developers in mysore