ಗಡಿ ವಿವಾದ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ನಮ್ಮ ಒಲವು- ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ.

Promotion

ಮುಂಬೈ,ನವೆಂಬರ್,24,2022(www.justkannada.in): ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಪದೇ ಪದೇ ಖ್ಯಾತೆ ವಿಚಾರ ಸಂಬಂಧ  ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ, ಗಡಿ ವಿವಾದ  ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ನಮ್ಮ ಒಲವು. ಗಡಿ ವಿವಾದ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ.  ಇದರ ಜೊತೆಗೆ ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು.  ಇದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ ಎಂದಿದ್ದಾರೆ.

ಈಗಾಗಲೇ ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸಹ ಸಕರಾತ್ಮಕ ನಿಲುವು ವ್ಯಕ್ತಪಡಿಸಿದೆ . ಹೀಗಾಗಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ನಮ್ಮ ನಿಲುವಾಗಿದೆ ಎಂದು ಏಕನಾಥ್ ಸಿಂಧೆ ಹೇಳಿದ್ದಾರೆ.

Key words: Border –dispute- Our preference – settle – negotiation- Maharashtra CM- Eknath Sinde.