ಮೈಸೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಗುದ್ದಲಿ ಪೂಜೆಗೆ ಬ್ರೇಕ್….!

ಮೈಸೂರು,ಜು,9,2020(www.justkannada.in): ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು ಜಿಲ್ಲಾಡಳಿತ ಕೊರೋನಾ ಸೋಂಕು ಹರಡುವುದನ್ನ ತಡೆಗಟ್ಟಲು ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುತ್ತಿದೆ.

ಈ ಮಧ್ಯೆ ಜಿಲ್ಲೆಯಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಗುದ್ದಲಿ ಪೂಜೆಗಳಿಗೂ ಬ್ರೇಕ್ ಹಾಕಲು ಮೈಸೂರು ಜಿಲ್ಲಾಡಳಿತ ನಿರ್ಧರಿಸಿದೆ.  ಈ ಸಂಬಂಧ ಉದ್ಘಾಟನೆ ,ಗುದ್ದಲಿ ಪೂಜೆ ಕಾರ್ಯಕ್ರಮಗಳನ್ನ ಮುಂದೂಡುವಂತೆ ಸಚಿವರು, ಶಾಸಕರು, ಸಂಸದರ ಆಪ್ತ ಸಹಾಯಕರಿಗೆ  ಮೈಸೂರು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.break-mysore-dc-development-work

ಜಿಲ್ಲೆಯಲ್ಲಿ ಕೋರೋನ ಹೆಚ್ಚುತ್ತಿರುವ ಹಿನ್ನೆಲೆ ಈ ಕ್ರಮಕ್ಕೆ ಮುಂದಾಗಿದ್ದು 20ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ಜನಪ್ರತಿನಿಧಿಗಳಿಗೆ ಡಿಸಿ ಮನವಿ ಮಾಡಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಹಾಗೂ ಚುನಾಯಿತ ಜನಪತ್ರಿನಿಧಿಗಳ ಆರೋಗ್ಯದ ದೃಷ್ಠಿಯಿಂದ ಉದ್ಘಾಟನೆ ,ಗುದ್ದಲಿ ಪೂಜೆ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಮುಂದಾಗಿದೆ.

Key words: break – Mysore –DC- development –work