ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್  ಎಚ್ಚರಿಕೆ…

breaking-down-lock-down-rule-stringent-action-bangalore-city-police-commissioner-kamal-pant
Promotion

ಬೆಂಗಳೂರು,ಮೇ,22,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ಮೇ,24ರವರೆಗೆ  ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಓಡಾಡುವವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.jk

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಈ ಬಾರಿ ಲಾಕ್ ಡೌನ್ ನಿಯಮ ಮತ್ತಷ್ಟು ಟಫ್ ಇರುತ್ತದೆ. ಅನಗತ್ಯವಾಗಿ ಓಡಾಡಿದರೇ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ.breaking-down-lock-down-rule-stringent-action-bangalore-city-police-commissioner-kamal-pant

ಮೇ.24ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ನಿಯಮವನ್ನ 14 ದಿನಗಳ ಕಾಲ ಅಂದರೇ ಜೂನ್ 7ರವರೆಗೆ ವಿಸ್ತರಣೆ ಮಾಡಿ ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಹಾಗೆಯೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೆ ಸೂಚಿಸಿದ್ದಾರೆ.

Key words: Breaking down – lock-down -rule -stringent action-  Bangalore City -Police Commissioner- Kamal Pant