“ಬೃಂದಾವನ ಮಾದರಿಯ ಉದ್ಯಾನವನ, ಬಜೆಟ್ ನಲ್ಲಿ ಘೋಷಿಸಲು ತೀರ್ಮಾನ” : ಸಚಿವ ಎಸ್.ಟಿ.ಸೋಮಶೇಖರ್

kannada t-shirts

ಮೈಸೂರು,ಫೆಬ್ರವರಿ,23,2024(www.justkannada.in): ಕೆಆರ್‌ಎಸ್ ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲೂ 48 ಕೋಟಿ ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

jkಮಂಗಳವಾರ ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು ಗಡಿಭಾಗದಲ್ಲಿರುವ ಕಂಚಮಳ್ಳಿಯ ಹತ್ತಿರ ಸ್ವಾಗತ ಕಮಾನನ್ನು ಉದ್ಘಾಟಿಸಿ ಅವರು ಮಾತನಾಡಿ, ಅನೇಕ ಜನರು ಎಚ್.ಡಿ.ಕೋಟೆ ಹೆಸರು ಕೇಳಿರುತ್ತಾರೆ. ಆದರೆ, ಇಲ್ಲಿನ ಪ್ರವಾಸೋದ್ಯಮ ವೈಶಿಷ್ಟ್ಯತೆಗಳು ತಿಳಿದಿರುವುದಿಲ್ಲ. ಈ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿರುವ ಪ್ರಕೃತಿ ಸಂಪತ್ತನ್ನು ಪರಿಚಯಸಲು ಸ್ವಾಗತ ಕಮಾನು ನೆರವಾಗಲಿದೆ ಎಂದರು.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಒಂದು ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳಲಾಗುವುದು. ಈ ಮೂಲಕ ಜಿಲ್ಲೆಯ ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ ಜಿಲ್ಲೆಯ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೂ ಸಹ ನಾನು ಬದ್ಧನಿದ್ದೇನೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

key words : Brindavan-Patterned-Park-budget-announce-Conclusion-Minister-S.T.Somashekhar

website developers in mysore