ಬಿಎಸ್ ವೈ ಒಬ್ಬ ಮಾಸ್ ಲೀಡರ್: ಸಿಎಂ ಬದಲಾವಣೆ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ- ಶಾಸಕ ಎಂಪಿ ರೇಣುಕಾಚಾರ್ಯ.

Promotion

ಬೆಂಗಳೂರು,ಜುಲೈ,20,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಒಬ್ಬ ಮಾಸ್ ಲೀಡರ್. ಅವರು ನಮ್ಮ ನಾಯಕರು. ಸಿಎಂ ಬದಲಾವಣೆ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.jk

ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಸಿಎಂ ಬಿಎಸ್ ವೈ ದೆಹಲಿಗೆ ಹೋಗಿ ನಾಯಕರನ್ನ ಭೇಟಿ ಮಾಡಿದ್ದಾರೆ. ಭೇಟಿ ನಂತರ ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಕೂಸು ಹುಟ್ಟುವ ಮುನ್ನ ಕುಲಾವಿ ಹೊಲೆಸೋದು ತಪ್ಪು ಎಂದರು.

ಬಿಎಸ್ ವೈ ಎಲ್ಲಾ ವರ್ಗ, ಮಠಗಳಿಗೆ ಅನುದಾನ ನೀಡಿದ್ದಾರೆ. ಹೀಗಾಗಿ ಎಲ್ಲಾ ವರ್ಗದ ಬೆಂಬಲ ಬಿಎಸ್ ವೈಗೆ ಇದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದರು.

Key words: BS Yeddyurappa -Mass Leader- CM –MLA-MP Renukacharya