ಶಿವಮೊಗ್ಗ ಜಿಲ್ಲೆ ಜನರಿಗೆ ಕೊಟ್ಟಿದ್ದ ಮಾತು ಉಳಿಸಿಕೊಳ್ಳದ ಬಿಎಸ್ ವೈಗೆ ಮತ ಕೇಳಲು ನೈತಿಕತೆ ಇಲ್ಲ- ಡಿ.ಕೆ ಶಿವಕುಮಾರ್.

Promotion

ಬೆಂಗಳೂರು,ಫೆಬ್ರವರಿ,8,2023(www.justkannada.in): ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ   ಬಿ.ಎಸ್ ಯಡಿಯೂರಪ್ಪಅವರು ಶಿವಮೊಗ್ಗ  ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ.  ಈ ಹಿನ್ನೆಲೆಯಲ್ಲಿ ಅವರಿಗೆ  ಈ ಬಾರಿ ಜಿಲ್ಲೆಯಲ್ಲಿ ಅವರಿಗೆ ಮತ ಕೇಳುವ ನೈತಿಕತೆ ಇಲ್ಲ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಭದ್ರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ ಶಿವಕುಮಾರ್, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದ್ದು, ನಗರದ ವಿಐಎಸ್ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ ಸುಮಾರು 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಶಾಸಕರಾದ ಬಿ.ಕೆ ಸಂಗಮೇಶ್ವರ,  ಎನ್.ಎ ಹ್ಯಾರಿಸ್, ಸಲೀಂ ಅಹಮದ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಗೋಪಾಲ ಕೃಷ್ಣ ಬೇಲೂರು ಇನ್ನಿತರರು ಉಪಸ್ಥಿತರಿದ್ದರು.

Key words: BS Yeddyurappa- not keep – promise – people –Shimoga-DK Shivakumar.