ರಾಜ್ಯದ ನೂತನ ಸಿಎಂ ಆಗಿ ಇಂದೇ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ಯಡಿಯೂರಪ್ಪ….

Promotion

ಬೆಂಗಳೂರು,ಜು,26,2019(www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದೇ  ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಎಸ್ ಯಡಿಯೂರಪ್ಪಗೆ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ  ದವಳಗಿರಿ ನಿವಾಸದಲ್ಲಿ ಪ್ರತಿಕ್ರಿಯಿಸಿರುವ ಬಿಎಸ್ ಯಡಿಯೂರಪ್ಪ, ಇಂದು ಬೆಳಿಗ್ಗೆ 10 ಗಂಟೆಗೆ ರಾಜ್ಯಪಾಲರನ್ನ ಭೇಟಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಅವಕಾಶ ಕೋರುವೆ. ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸುವೆ. ಮಧ್ಯಾಹ್ನ12.30ಕ್ಕೆ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ತಿಳಿಸಿದ್ದಾರೆ.

Key words: BS Yeddyurappa-today- sworn – new CM – state.