ರಾಜ್ಯದಲ್ಲಿ ಕನ್ನಡಿಗರಿಂದ ಆಡಳಿತ ನಡೆಯಬೇಕೇ ಹೊರತು, ದೆಹಲಿ ಬಿಜೆಪಿ ಹೈಕಮಾಂಡ್ನಿಂದ ಅಲ್ಲ ಎಂದ ಎಚ್ಡಿಕೆ

Promotion

ಬೆಂಗಳೂರು, ಜುಲೈ 18, 2021 (www.justkannada.in): ರಾಜ್ಯದಲ್ಲಿ ಕನ್ನಡಿಗರಿಂದ ಆಡಳಿತ ನಡೆಯಬೇಕೇ ಹೊರತು, ದೆಹಲಿ ಬಿಜೆಪಿ ಹೈಕಮಾಂಡ್​​ನಿಂದ ಅಲ್ಲ ಎಂದು ಮಾಜಿ ಸಿಎಂ ಎಚ್ಡಿಕೆ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ವಿಶೇಷ ವಿಮಾನದಲ್ಲಿ ಆರು ಬ್ಯಾಗ್ ಗಳಲ್ಲಿ ದೆಹಲಿಗೆ ಏನು ಕೊಂಡೊಯ್ದರು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಸಿಎಂ ನಿನ್ನೆ ದೆಹಲಿಗೆ ಹೋಗುವಾಗ ಹೈ ಕಮಾಂಡ್​​ಗೆ ಕೊಡೋಕೆ ಆರು ಬ್ಯಾಗ್ ಗಳನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗಿದ್ದಾರೆ . ಉಡುಗೊರೆ ಕೊಂಡು ಹೋಗಿದ್ದಾರಾ ಅಥವಾ ಬೇರೆ ಏನು ತಗೊಂಡು ಹೋಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದು ಎಚ್​ಡಿಕೆ ಕೇಳಿದ್ದಾರೆ.

ರಾಜ್ಯದಲ್ಲಿ ಕನ್ನಡಿಗರಿಂದ ಆಡಳಿತ ನಡೆಯಬೇಕೇ ಹೊರತು, ದೆಹಲಿ ಬಿಜೆಪಿ ಹೈಕಮಾಂಡ್​​ನಿಂದ ಅಲ್ಲ. ನಿನ್ನೆ ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಸ್ಪೆಷಲ್ ಫ್ಲೈಟ್ ನಲ್ಲಿ ಹೋಗುವಾಗ ಆರು ಬ್ಯಾಗ್ ಗಳನ್ನು ತಗೊಂಡು ಹೋಗಿದ್ದಾರೆ ಎಂದಿದ್ದಾರೆ.