ಇಂದು 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ….

ಬೆಂಗಳೂರು,ಮಾರ್ಚ್,8,2021(www.justkannada.in): 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಎಲ್ಲರ ಚಿತ್ತ ಬಜೆಟ್ ನತ್ತ ಇದೆ.jk

ವಿಧಾನಸಭೆಯಲ್ಲಿ ಇಂದು 12 ಗಂಟೆಗೆ ಸಿಎಂ ಬಿಎಸ್ ಯಡಿಯೂರಪ್ಪ  ಬಜೆಟ್ ಮಂಡನೆ ಮಾಡಲಿದ್ದಾರೆ. 8ನೇ ಬಾರಿ ಬಜೆಟ್ ಮಂಡಿಸುತ್ತಿರುವ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೊರೋನಾ, ಆರ್ಥಿಕ ಸಂಕಷ್ಟದ ನಡುವೆಯೂ ಸಿಹಿ ಸುದ್ದಿಯನ್ನು ಕೊಡುವರೇ  ಎನ್ನುವ ಕುತೂಹಲ ಮೂಡಿಸಿದೆ.

ಬಜೆಟ್ ಮಂಡನೆ ಹಿನ್ನೆಲೆ ಶೇಷಾದ್ರಿಪುರಂನಲ್ಲಿರುವ ರಾಘವೇಂದ್ರಸ್ವಾಮಿ ಮಠಕ್ಕೆ ಸಿಎಂ ಬಿಎಸ್ ವೈ ಭೇಟಿ ನೀಡಿ ದಿನನಿತ್ಯದ ಪೂಜೆ ಸಲ್ಲಿಸಲಿದ್ದಾರೆ. ನಂತರ ಸಚಿವ ಸಂಪುಟ ಸಭೆಯನ್ನು ನಡೆಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ, ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆಯಲಿದ್ದಾರೆ.

ಈ ಬಾರಿಯ ಬಜೆಟ್​​ ಗಾತ್ರ 2.40 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ.  ಈಗಾಗಲೇ ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿರುವುದರಿಂದ, ಜನರ ಮೇಲೆ ತೆರಿಗೆ ಹೊರೆ ಹೆಚ್ಚಿಸದಿರುವ ಅನಿವಾರ್ಯತೆ ಬಿಎಸ್​ವೈ ಸರ್ಕಾರದ ಮುಂದಿದೆ. ಹೀಗಾಗಿ ಈ ಬಜೆಟ್​ನಲ್ಲಿ ತೆರಿಗೆ ಹೊರೆ ಕಡಿಮೆ ಮಾಡುವ ಸಾಧ್ಯತೆ ಇದೆ. ಪೆಟ್ರೋಲ್​, ಡೀಸೆಲ್​ ಮೇಲಿನ ತೆರಿಗೆ ಯಥಾಸ್ಥಿತಿ ಇರಲಿದ್ದು ಬಜೆಟ್​ನಲ್ಲಿ ಅಬಕಾರಿ ತೆರಿಗೆ ಹೆಚ್ಚಿಸುವ ನಿರೀಕ್ಷೆ ಇದೆ. ಇತರ ತೆರಿಗೆ ಮೂಲಗಳಾದ ಮೋಟಾರು ವಾಹನ ತೆರಿಗೆ, ನೋಂದಣಿ, ಮುದ್ರಾಂಕ ಶುಲ್ಕ ಹೆಚ್ಚಳ ಸಾಧ್ಯತೆ ಇದ್ದು ಕೆಲವು ಇಲಾಖೆಗಳ ಅನುದಾನ ಕಡಿತದ ಬಗ್ಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುನ್ಸೂಚನೆ ನೀಡಲಾಗಿದೆ.budget-2021-22-today-cm-bs-yeddyurappa

ಕನ್ನಡ ಮತ್ತ ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಸಕ್ಕರೆ ಇಲಾಖೆಗಳ ಅನುದಾನಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಕೊರೋನಾ ಹಿನ್ನಲೆಯಲ್ಲಿ ಯಾವುದೇ ಹೊಸ ತೆರಿಗೆ ವಿಧಿಸೋದಿಲ್ಲ ಎಂಬುದಾಗಿ ಹೇಳಲಾಗುತ್ತಿದೆ. ಮಾರ್ಚ್.8ರ ಇಂದಿನ ವಿಶ್ವ ಮಹಿಳಾ ದಿನಾಚರಣೆಯಂದೇ ಮಂಡಿಸಲ್ಪಟುತ್ತಿರುವ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೂ ಯೋಜನೆ, ಮಹಿಳೆಯರು, ರೈತರಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಿದ್ದಾರೆ ಎನ್ನಲಾಗಿದೆ. ಕೃಷಿ, ಪ್ರವಾಸೋದ್ಯಮ, ನೀರಾವರಿ,ಶಿಕ್ಷಣ,  ಹೆಚ್ಚು ಒತ್ತು ನೀಡಲಿದ್ದಾರೆ ಎನ್ನಲಾಗಿದೆ. ಇನ್ನು ನೂತನ ಶಿಕ್ಷಣ ನೀತಿ ಕಾರ್ಯರೂಪಕ್ಕೆ ಒತ್ತು ನೀಡುವ ಸಲುವಾಗಿ, ಇಂದಿನ ರಾಜ್ಯ ಬಜೆಟ್ ನಲ್ಲಿ ಅದಕ್ಕೂ ಹಣ ಮೀಸಲಾತಿ ನೀಡುವ ನಿರೀಕ್ಷೆಯಿದೆ.

Key words: Budget – 2021-22 –today-cm bs yeddyurappa