ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಿ-ಕೇಂದ್ರಕ್ಕೆ ಕುರುಬೂರು ಶಾಂತ ಕುಮಾರ್ ಒತ್ತಾಯ.

kannada t-shirts

ಬೆಂಗಳೂರು,ಜನವರಿ,31,2023(www.justkannada.in):   ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು ಈ ಹಿನ್ನೆಲೆಯಲ್ಲಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಬಜೆಟ್ ನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘ  ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯ ಮಾಡಿದರು.

ಈ ಕುರಿತು ಮಾತನಾಡಿರುವ ಕುರುಬೂರು ಶಾಂತಕುಮಾರ್, ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನಾತ್ಮಕ ಖಾತ್ರಿ ನೀಡುವ ಬಗ್ಗೆ ಪ್ರಧಾನಿ ಮೋದಿ ಭರವಸೆ ಜಾರಿಯಾಗಬೇಕು. ಕೃಷಿ ಉತ್ಪನ್ನಗಳ ಮೇಲೆ ರಸಗೊಬ್ಬರ, ಕೀಟನಾಶಕ ಹಾನಿ, ನೀರಾವರಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್ ಟಿ ರದ್ದುಗೊಳಿಸಬೇಕು. ಪ್ರಸಕ್ತವಾಗಿರುವ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಉತ್ಪಾದನಾ ಸಾಲ ಬಡ್ಡಿ ರಹಿತವಾಗಿರಬೇಕು. ಕೃಷಿ ಭೂಮಿ ಮೌಲ್ಯದ ಶೇಕಡ 75ರಷ್ಟು ಸಾಲ ನೀಡುವಂತೆ ನೀತಿ ರೂಪಿಸಿ ಎಂದು ಸಲಹೆ ನೀಡಿದರು.

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಮಾನದಂಡ ಕೈಬಿಡಬೇಕು. ಕಬ್ಬಿನ ಎಫ್ ಆರ್ ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಭೇಕು,ಆಕಸ್ಮಿಕ ಬೆಂಕಿಗೆ ಸುಟ್ಟು ಹೋದ ಕಬ್ಬಿನಿಂದ ಸಕ್ಕರೆ ಕಾರ್ಖಾನೆಗಳು ಶೆ 25% ರಷ್ಟು ಹಣ ಕಡಿತ ಮಾಡುವುದನ್ನು ನಿಲ್ಲಿಸಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕನಿಷ್ಠ 9:5ಕ್ಕೆ ಇಳಿಸಬೇಕು . ಕಬ್ಬು ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ಎಫ್ ಆರ್ ಪಿ ದರವನ್ನು 2023-24ನೆ ಸಾಲಿಗೆ ಕನಿಷ್ಠ ಟನ್ ಗೆ 3500 ನಿಗದಿ ಮಾಡಬೇಕು.  ಕಬ್ಬಿನಿಂದ ಉತ್ಪಾದಿಸುವ ಯತನಾಲ್ ನೀತಿ ಬದಲಾಯಿಸಿ ಮುಕ್ತ ಅವಕಾಶ ಕಲ್ಪಿಸಬೇಕು, ರೈತರ ಬೆಲ್ಲದ ಗಾಣದಲ್ಲಿ ಉತ್ಪಾದನೆಗೆ ಅವಕಾಶ ಕಲ್ಪಿಸಬೇಕು. ಎಲ್ಲ ಕೃಷಿ ಉತ್ಪನ್ನ ಬೆಳೆಗಳಿಗೂ ಪಸಲ್ ಭೀಮಾ ಬೆಳೆ ವಿಮೆ ಯೋಜನೆ ಜಾರಿ ತರಬೇಕು ಈ ಯೋಜನೆ ಕೆಲವು ತಿದ್ದುಪಡಿಗಳು ಆಗಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ಅತಿವೃಷ್ಟಿ-ಅನಾವೃಷ್ಟಿ ಆಕಸ್ಮಿಕ ಬೆಂಕಿ ಪ್ರವಾಹ ಹಾನಿ ಬೆಳೆ ನಾಶ ಪರಿಹಾರ ಮಾನದಂಡ ವೈಜ್ಞಾನಿಕವಾಗಿ ಬದಲಾಗಬೇಕು. ವನ್ಯಮೃಗಗಳ ಸಂರಕ್ಷಣೆ, ಮಾನವ ರಕ್ಷಣಾ ಕಾಯ್ದೆ ಕಾಡು ಪ್ರಾಣಿಗಳ ಹಾವಳಿ ತಡೆ ಕಾನೂನು 1972ಕ್ಕೆ ತಿದ್ದುಪಡಿ ತರಬೇಕು. ಕಾಡು ಪ್ರಾಣಿಗಳ ದಾಳಿಗೆ ತುತ್ತಾದ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತ 50 ಲಕ್ಷ ರೂ.ಗಳಿಗೆ ಏರಿಸಬೇಕು

ಕೇಂದ್ರ ಸರ್ಕಾರವೇ ಆರಂಭಿಸಿರುವ ,ಕೊರೋನಾ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ಎಲ್ಲಾ ರೈತ ಉತ್ಪಾದಕ ಸಂಸ್ಥೆಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ಹೊಸ ಸಾಲ ಎಂದು ಪರಿಗಣಿಸಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಮುನ್ನಡೆಸಲು ಪುನಶ್ಚೇತನ ಸಾಲ ನೀಡಿ ಪ್ರೋತ್ಸಾಹಿಸಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

Key words: budget – solve -problems – farmers-Kuruburu Shanthakumar

 

website developers in mysore