ರಾಜ್ಯ ಬಜೆಟ್ ನಲ್ಲಿ ಮೈಸೂರಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿ ಸಿಎಂಗೆ ಪತ್ರ ಬರೆದ ಶಾಸಕ ತನ್ವೀರ್ ಸೇಠ್.

Promotion

ಮೈಸೂರು,ಫೆಬ್ರವರಿ,21,2022(www.justkannada.in): ಮಾರ್ಚ್ 8ರಂದು ರಾಜ್ಯ ಬಜೆಟ್ ಹಿನ್ನಲೆ, ಸಾಂಸ್ಕೃತಿಕ ನಗರಿ ಮೈಸೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.

ಮೈಸೂರಿನ ಸಮಗ್ರ ಅಭಿವೃದ್ಧಿಗೆ 108 ಅಂಶಗಳ ಪಟ್ಟಿ ತಯಾರಿ ಮಾಡಿ ಸಿಎಂ ಬೊಮ್ಮಾಯಿಗೆ ಮೈಸೂರಿನ ಅಭಿವೃದ್ಧಿ ಹಾಗೂ ಯೋಜನೆ ಕುರಿತು ಪತ್ರ ರವಾನೆ ಮಾಡಿರುವ ಶಾಸಕ ತನ್ವೀರ್ ಸೇಠ್, ಮೈಸೂರು ಅನೇಕ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಪ್ರವಾಸಿ ತಾಣಗಳಿವೆ. ಉದ್ಯಮಿಗಳು, ವಿದ್ಯಾರ್ಥಿಗಳು, ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಪ್ರಸ್ತುತ ಇರುವ ಮೂಲಭೂತ ಸೌಕರ್ಯಗಳು ನಗರ ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿಲ್ಲ. ಹಾಗಾಗಿ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.start-oxygen-bus-service-mysore-mla-tanvir-sait-letter-incharge-minister

ನಗರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಪಡಿಸಿ. ಪೊಲೀಸ್ ಆಕಾಡೆಮಿ ಹಾಗೂ ಪೊಲೀಸ್ ತರಬೇತಿ ಕೇಂದ್ರ ಸ್ಥಳಾಂತರ ಮಾಡಲು 100 ಎಕರೆ ಜಮೀನನ್ನು ಮಂಜೂರು ಮಾಡಿ. ನಗರದ ಬೆಳವಣಿಗೆ ಆಧರಿಸಿ ಹೆಚ್ಚುವರಿ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿಗದಿ ಪಡಿಸಿರುವ ನಿವೇಶನದಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವುದು. ಕಾವೇರಿ ವರ್ತುಲ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವುದು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಪತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಾಸಕ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ.

Key words: budget-Tanveer sait-mysore-CM Basavaraj bommai