ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 12 ಮಂದಿ ದುರ್ಮರಣ: 40 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ…

Promotion

ಮುಂಬೈ, ಜು,16,2019(www.justkannada.in): ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 12 ಮಂದಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ಇಂದು ನಡೆದಿದೆ.

ಮುಂಬೈನ ಡೋಂಗ್ರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.  ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಕುಸಿದಿದೆ ಎಂದು ಹೇಳಲಾಗುತ್ತಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ 40ರಿಂದ 50 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರ ಪೈಕಿ 5 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಸ್ಥಳಕ್ಕೆ ಅಗ್ನಿ ಶಾಮಕದಳ  ಎನ್ ಡಿಆರ್ ಎಫ್ ದಂಡ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

Key words: building- collapses-12death-munbai