ಕಟ್ಟಡ ಕಾಮಗಾರಿ ವೇಳೆ ಭೂ ಕುಸಿತ: ಇಬ್ಬರು ಕಾರ್ಮಿಕರು ಸಾವು

Promotion

ಮಂಗಳೂರು,ಫೆ,28,2020(www.justkannada.in): ಕಟ್ಟಡ ಕಾಮಗಾರಿ ವೇಳೆ ಭೂ ಕುಸಿತ  ಉಂಟಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಬಂಟ್ಸ್ ಹಾಸ್ಟೆಲ್ ಬಳಿ ಈ ಘಟನೆ ನಡೆದಿದೆ.  ಪಶ್ಚಿಮಬಂಗಾಳ ಮೂಲದ ಮಸೂದ್, ಭಾಗಲಕೋಟೆಯ ಭೀಮಣ್ಣ ಮೃತಪಟ್ಟವರು.  ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣು ಕುಸಿದಿದ್ದು ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಶವ ಹೊರತೆಗೆದಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ನಡುವೆ ಮಣ್ಣಿನಡಿ ಸಿಲುಕಿದ್ದವರನ್ನ ರಕ್ಷಣೆ ಮಾಡಲಾಗುತ್ತಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: building works- Collapse-death – two workers-mangalore