ಖಾಸಗಿ ಬಸ್ ಅಪಘಾತ ಪ್ರಕರಣ: ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಅರಗ ಜ್ಞಾನೇಂದ್ರ.

Promotion

ತುಮಕೂರು,ಮಾರ್ಚ್,20,2022(www.justkannada.in):  ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ  ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ನಿನ್ನೆ ಪಳವಳ್ಳಿ ಬಳಿ  ಖಾಸಗಿ ಬಸ್  ಪಲ್ಟಿಯಾಗಿ 8 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ  ಗಾಯಗೊಂಡಿದ್ದರು. ಈ ನಡುವೆ ಇಂದು ತುಮಕೂರು ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಹಾಗೆಯೇ ಸರ್ಕಾರದಿಂದ ಪರಿಹಾರ ನೀಡುವ ಭರವಸೆ ಕೊಟ್ಟರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕ ರಘುವನ್ನ ಪೊಲೀಸರು  ವಶಕ್ಕೆ ಪಡೆದಿದ್ದು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: bus-accident-minister araga jnanendra