ಲಾರಿಗೆ ಬಸ್ ಡಿಕ್ಕಿಯಾಗಿ ಯುವಕ ದುರ್ಮರಣ: 20ಕ್ಕೂ ಹೆಚ್ಚು ಮಂದಿಗೆ ಗಾಯ.

Promotion

ಮಂಡ್ಯ,ನವೆಂಬರ್,5,2022(www.justkannada.in):  ಲಾರಿಗೆ ಬಸ್ ಡಿಕ್ಕಿಯಾಗಿ ಯುವಕ  ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ.

ನಾಗಮಂಗಲದ ಗೊಂದಿಹಳ್ಳಿ ಬಳಿ ಈ ಘಟನೆ ನಡೆದಿದೆ. ಅಕ್ಷಯ್ ಎಂಬ ಯುವಕ ಅಪಘಾತದಲ್ಲಿ ಮೃತಪಟ್ಟರೇ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು ಈ ವೇಳೆ ಘಟನೆ ನಡೆದಿದೆ.

ಈ ಕುರಿತು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: bus –collision- lorry-death- More than -20 injured.