ಬಸ್ ಪ್ರಯಾಣ ದರ ಹೆಚ್ಚಳ ಮಾಡಲ್ಲ- ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ…

Promotion

ವಿಜಯಪುರ,ಫೆಬ್ರವರಿ,27,2021(www.justkannada.in): ಕೊರೋನಾ ಸಂಕಷ್ಟದಲ್ಲಿ ಜನ ಸಿಲುಕಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲ್ಲ ಎಂದು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ ನೀಡಿದರು.

ವಿಜಯಪುರದಲ್ಲಿ  ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,   ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣದರ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಲ್ಲ. ಬಸ್ ಪ್ರಯಾಣ ದರ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂದು ಈ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.Bus- fare- not- increased- DCM -Laxman Savdi

ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಇದೆ. ಸಿಎಂ ಜತೆ ಕುಳಿತು ಚರ್ಚಿಸಿ ಬಿಎಂಟಿಸಿ ಬಸ್ ಪ್ರಯಾಣದ ಹೆಚ್ಚಳದ ಬಗ್ಗೆ ಚರ್ಚಿಸುತ್ತೇನೆ. ಬಜೆಟ್ ನಂತರ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದಿದ್ದರು.

 

Key words: Bus- fare- not- increased- DCM -Laxman Savdi