ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌: ಸಿಂಗಲ್ಸ್’ನಲ್ಲಿ ಫೈನಲ್ಸ್ ಪ್ರವೇಶಿಸಿ ದಾಖಲೆ ಬರೆದ ಶ್ರೀಕಾಂತ್

ಬೆಂಗಳೂರು, ಡಿಸೆಂಬರ್ 19, 2021 (www.justkannada.in): ಹುಯೆಲ್ವಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಹೊಸ ದಾಖಲೆ ಬರೆದಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಸೆಮಿ ಫೈನಲ್ ನಲ್ಲಿ ಕಿಡಂಬಿ ಶ್ರೀಕಾಂತ್ ಅವರು ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಲಕ್ಷ್ಯ ಸೇನ್ ರನ್ನು ಶ್ರೀಕಾಂತ್ ಅವರು, 21-17, 17-17, 21-14 ನೇರ ಸೆಟ್ ಗಳ ಅಂತರದಲ್ಲಿ ಮಣಿಸಿ ಭರ್ಜರಿಯಾಗಿ ಫೈನಲ್ ಪ್ರವೇಶಿಸಿದ್ದಾರೆ.