ಈ ಬಾರಿ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನ ಜನ ತಿರಸ್ಕರಿಸಿದ್ದಾರೆ-ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್…

 

ಬೆಂಗಳೂರು,ಅ,24,2019(www.justkannada.in):  ಇಂದು ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ಮತ್ತು ಬೇರೆ ರಾಜ್ಯಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಈ ಬಾರಿ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನ ಜನ ತಿರಸ್ಕರಿಸಿದ್ದಾರೆ. ಕರ್ನಾಟಕದಲ್ಲೂ ಬಹುಪಾಲು ಕಾಂಗ್ರೆಸ್ ಗೆಲ್ಲಲಿದೆ. ಇಲ್ಲಿಯೂ ಪಕ್ಷಾಂತರಿಗಳನ್ನ ಜನ ತಿರಸ್ಕರಿಸಲಿದ್ದಾರೆ ಎಂದು ಅನರ್ಹ ಶಾಸಕರು ಮತ್ತು ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ಧರಾಮಯ್ಯ, ಈ ಬಾರಿ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನ ಜನ ತಿರಸ್ಕರಿಸಿದ್ದಾರೆ. ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಬಿಜೆಪಿಗೆ ಕುಟುಕಿದ್ದಾರೆ.

ಹರಿಯಾಣ ಮಹಾರಾಷ್ಟ್ರ ಉಪಚುನಾವಣೆ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ,  ಮೋದಿ ಜನಪ್ರೀಯತೆ ಕಡಿಮೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೇ ಕಡಿಮೆ ಸ್ಥಾನ ಗೆದ್ದಿದ್ದಾರೆ. ನಾವು ಹರಿಯಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆಂಬ ನಿರೀಕ್ಷೆ ಇತ್ತು. ಆದರೆ ಮಹಾರಾಷ್ಟ್ರದಲ್ಲಿ ನಿರೀಕ್ಷೆ ಇರಲಿಲ್ಲ . ಮಹಾರಾಷ್ಟ್ರದಲ್ಲಿ ನಾನು ಪ್ರಚಾರ ಮಾಡಿದ ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರು.

Key words: by election- rejected – Defection-Former CM -Siddaramaiah – Twitter