ಹೊಸಕೋಟೆ ಉಪಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಕಣಕ್ಕೆ..?

ಬೆಂಗಳೂರು,ನ,10,2019(www.justkannada.in):  ಡಿಸೆಂಬರ್ 5 ರಂದು ಉಪಚುನಾವಣೆ ಹಿನ್ನೆಲೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 15 ಕ್ಷೇತ್ರಗಳಲ್ಲೂ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ. ಈ ನಡುವೆ ಹೊಸಕೋಟೆ ಕ್ಷೇತ್ರದಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜುಗೆ ಟಿಕೆಟ್ ನೀಡಲು ಮುಂದಾದ ಹಿನ್ನೆಲೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಶರತ್ ಬಚ್ಚೇಗೌಡ ಬಂಡಾಯವೆದ್ದಿದ್ದಾರೆ.

ಇಂದು ಹೊಸಕೋಟೆ ತಾಲ್ಲೂಕಿನ ಬಾವಾಪುರದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶರತ್ ಬಚ್ಚೇಗೌಡ ನವೆಂಬರ್ 15 ರಂದು ನಾಮಪತ್ರ ಸಲ್ಲಿಸುತ್ತೇನೆ. ನನ್ನನ್ನ ಬೆಂಬಲಿಸಿ ಎಂದು ಬೆಂಬಲಿಗರ ಬಳಿ ಮನವಿ ಮಾಡಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಈ ಮೂಲಕ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೇ ಎಂಟಿಬಿ ನಾಗರಾಜ್ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ತೊಡೆ ತಟ್ಟಲು ಶರತ್ ಬಚ್ಚೇಗೌಡ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Key words: by-election-Sharath Bacchegowda –nomination –file-independent candidate