Monday, September 28, 2026

BDA Apartments

ಬಿವೈ ವಿಜಯೇಂದ್ರರನ್ನ ಅಳೆದು ತೂಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ- ಮಾಜಿ ...
Home Front Page ಬಿವೈ ವಿಜಯೇಂದ್ರರನ್ನ ಅಳೆದು ತೂಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ- ಮಾಜಿ ಸಚಿವ ಅರವಿಂದ ಲಿಂಬಾವಳಿ.

ಬಿವೈ ವಿಜಯೇಂದ್ರರನ್ನ ಅಳೆದು ತೂಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ- ಮಾಜಿ ಸಚಿವ ಅರವಿಂದ ಲಿಂಬಾವಳಿ.

ಬೆಳಗಾವಿ,ನವೆಂಬರ್,23,2023(www.justkannada.in):   ಬಿ.ವೈ.ವಿಜಯೇಂದ್ರ ಅವರನ್ನು ಅಳೆದು, ತೂಗಿ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿ ಮಾಜಿ ಸಚಿವ ಅರವಿಂದ ಲಿಂಬಾವಳಿ,  ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ . ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ  ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಈ ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ  ಹೆಚ್ಚು ಸ್ಥಾನ ಗೆಲ್ಲಿಸುತ್ತಿರಬಹುದು.ಬಿವೈ ವಿಜಯೇಂದ್ರರನ್ನ ಅಳೆದು ತೂಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ arvinda limbavali

ಅದಕ್ಕಾಗಿ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇಮಕ ಮಾಡಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.

Key words: BY Vijayendra – BJP-state- president  – Former Minister- Arvind Limbavali.